Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:44 - ಕನ್ನಡ ಸತ್ಯವೇದವು C.L. Bible (BSI)

44 ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಮುಂದಿನ ಸಬ್ಬತ್‍ದಿನದಲ್ಲಿ ಸ್ವಲ್ಪ ಕಡಿಮೆ ಊರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಫಿಡ್ಲ್ಯಾ ಸಬ್ಬತ್ತಾಚ್ಯಾ ದಿಸಿ ದೆವಾಚಿ ಗೊಸ್ಟಿಯಾ ಆಯ್ಕುಕ್ ಲೈ ಕರುನ್ ಸಗ್ಳ್ಯಾ ಶಾರಾಚಿ ಲೊಕಾಚ್ ಗೊಳಾ ಹೊವ್ನ್ ಯೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:44
6 ತಿಳಿವುಗಳ ಹೋಲಿಕೆ  

ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.


ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು