Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:6 - ಕನ್ನಡ ಸತ್ಯವೇದವು C.L. Bible (BSI)

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‍‍ಯೇಸು ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತ್ಯಾ ದ್ವಿಪಾತ್ ಫಿರುಂಗೆತ್ ಪಾಫೊಸ್ ಮನ್ತಲ್ಯಾ ಗಾಂವಾಕ್ ಜಾವ್ನ್ ಮೊಡಿ ಮಂತ್ರಾ ಕರ್‍ತಲ್ಯಾ ಜುದೆವಾಂಚೊ ಝುಟೊ ಪ್ರವಾದಿ ಹೊಲ್ಲೊ ಬಾರ್ ಜೆಜು ಮನ್ತಲ್ಯಾಕ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:6
24 ತಿಳಿವುಗಳ ಹೋಲಿಕೆ  

“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.


‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.


“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು