Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ಮಾಟಾ ಮಂತರ್ಕಾರಿ ಎಲಿಮಾ ತೆಂಕಾ ವಿರೊದ್ ಹೊಲ್ಲೊ, ಗ್ರಿಕ್ ಬಾಶೆತ್ ಬಾರ್ ಜೆಜುಕ್ ಎಲಿಮಾ ಮನುನ್ ಬಲ್‍ಯಿತ್ ರಾಜ್ಯಪಾಲಾಕ್ ದೆವಾಚೆರ್ ವಿಶ್ವಾಸ್ ಥೈನಾ ಸಾರ್ಕೆ ಕರುಕ್ ಹ್ಯೊ ಎಲಿಮಾ ಕಟ್ಪಟ್ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:8
16 ತಿಳಿವುಗಳ ಹೋಲಿಕೆ  

ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು