Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಚ್ಯಾ ಮಾನಾ ಜುದೆವಾಂಚಿ ಲೊಕಾ ಅಂತಿಯೊಕ್ಯ್ ಅನಿ ಇಕೊನಿಯಾ ಮನ್ತಲ್ಯಾ ಶಾರಾಂಚ್ಯಾಕ್ನಾ ಪಾವ್ಲುಕ್ ವಿರೊದ್ ಹೊವ್ನ್ ಯೆವ್ನ್ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ಪಾವ್ಲುಕ್ ಗುಂಡೆ ಮಾರುನ್ ತೊ ಮರ್ಲೊ ಮನುನ್ ಚಿಂತುನ್ ಶಾರಾತ್ನಾ ತೆಕಾ ವಡುನ್ ನೆವ್ನ್ ಭಾಯ್ರ್ ಟಾಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:19
26 ತಿಳಿವುಗಳ ಹೋಲಿಕೆ  

ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ.


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.


ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು