Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:27 - ಕನ್ನಡ ಸತ್ಯವೇದವು C.L. Bible (BSI)

27 ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಪಾವ್ಲು ಅನಿ ಬಾರ್ನಾಬಾಸ್ ಹಿತ್ತೆ ಪಾವಲ್ಲ್ಯಾ ತನ್ನಾ ತಾಂಡ್ಯಾಚ್ಯಾ ಲೊಕಾಕ್ನಿ ಸಗ್ಳೆ ಗೊಳಾ ಕರುನ್, ದೆವಾನ್ ಅಪ್ನಾ ವಾಂಗ್ಡಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ವಿಶಯಾತ್ ತೆಂಕಾ ಕಳ್ವುಲ್ಯಾನಿ, ಅನಿ “ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾನಿಬಿ ವಿಶ್ವಾಸ್‍ ಕರಿಸಾರ್ಕೆ ದೆವಾನ್ ದಾರಾ ಉಗಡ್ಲಾ!” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:27
15 ತಿಳಿವುಗಳ ಹೋಲಿಕೆ  

ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.


ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು