Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:8 - ಕನ್ನಡ ಸತ್ಯವೇದವು C.L. Bible (BSI)

8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಲಿಸ್ತ್ರಾ ಮನ್ತಲ್ಯಾ ಶಾರಾತ್ ಎಕ್ಲೊ ಜಲ್ಮಿಸೊಟ್ಟೊ ಮಾನುಸ್ ಹೊತ್ತೊ ತೆಚ್ಯಾ ಪಾಂಯಾತ್ನಿ ಬಳ್ ನತ್ತಿ, ಅನಿ ಕನ್ನಾಬಿ ಚಲಲೊಚ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:8
9 ತಿಳಿವುಗಳ ಹೋಲಿಕೆ  

‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.


“ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.


ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು