Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:14 - ಕನ್ನಡ ಸತ್ಯವೇದವು C.L. Bible (BSI)

14 ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಕಾಳ್ಜಿ ಕಸಿ ಕರ್ಲಾ ಮನ್ತಲೆ ಸಿಮಾವಾನ್ ಅಮ್ಕಾ ಕಳ್ವುಲ್ಯಾನ್ ದೆವಾನ್ ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಕರುನ್ ಘೆಟಲ್ಲೆ ಹೆಚ್ ಪೈಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:14
11 ತಿಳಿವುಗಳ ಹೋಲಿಕೆ  

ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು