Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:17 - ಕನ್ನಡ ಸತ್ಯವೇದವು C.L. Bible (BSI)

17 ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹುರಲ್ಲಿ ಲೊಕಾ ಧನಿಯಾಕ್ಡೆ ಯೆತಾತ್, ಜುದೆವ್ ನ್ಹಯ್ ಹೊಲ್ಲಿ ಲೊಕಾ ಮಾಕಾ ವಳಕ್ತಾತ್ ಮನುನ್ ಹೆ ಸಗ್ಳೆ ಧನಿ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:17
32 ತಿಳಿವುಗಳ ಹೋಲಿಕೆ  

ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು?


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ನೀವು ಯಾರಿಗೆ ಶರಣರಾಗಿದ್ದೀರೋ ಅವರ ಶ್ರೇಷ್ಠ ನಾಮವನ್ನು ದೂಷಿಸುವವರೂ ಸಿರಿವಂತರೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು