ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”
ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.
ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.
ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.
ನಿನ್ನ ವಿಷಯ ಅವರಿಗೆ ತಿಳಿದುಬಂದಿದೆ. ಅದೇನೆಂದರೆ ನೀನು ಅನ್ಯಧರ್ಮೀಯರ ನಡುವೆ ವಾಸಿಸುತ್ತಿರುವ ಯೆಹೂದ್ಯರೆಲ್ಲರಿಗೆ, ‘ನೀವು ಮೋಶೆಯ ನೇಮನಿಯಮಗಳನ್ನು ಅನುಸರಿಸಬಾರದು, ನಿಮ್ಮ ಮಕ್ಕಳಿಗೆ ಸುನ್ನತಿಯನ್ನು ಮಾಡಿಸಬಾರದು, ಯೆಹೂದ್ಯ ಸಂಪ್ರದಾಯಗಳನ್ನು ಆಚರಿಸಬಾರದು,’ ಎಂದು ಬೋಧಿಸುತ್ತಿರುವಿಯಂತೆ.
ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.