Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:3 - ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಚ್ ತಾಂಡ್ಯಾಚ್ಯಾ ಲೊಕಾನಿ ಹೆಂಕಾ ಧಾಡುನ್ ದಿಲ್ಯಾನಿ, ತೆನಿ ಪೊಯಿನಿಕ್ಯಾ ಅನಿ ಸಮರ್ಯಾ ಮನ್ತಲ್ಯಾ ಗಾಂವಾಂಚ್ಯಾ ವಾಟೆನ್ ಗೆಲೆ, ತೆನಿ ಹ್ಯಾ ಗಾಂವಾತ್ನಿ ಜುದೆವಾಂಚಿ ನ್ಹಯ್ ಹೊಲ್ಲಿ ಲೊಕಾಬಿ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ವಿಶಯಾತ್ ಸಾಂಗ್ಲ್ಯಾನಿ, ಹೆ ಆಯ್ಕುನ್ ಭಾವಾಕ್ನಿಬಿ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:3
27 ತಿಳಿವುಗಳ ಹೋಲಿಕೆ  

ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಧರ್ಮಶಾಸ್ತ್ರಜ್ಞನಾದ ಜೇನನಿಗೂ ಅಪೊಲೋಸನಿಗೂ ಅವರ ಪ್ರಯಾಣಕ್ಕೆ ಬೇಕಾದ ಸಹಾಯಮಾಡು. ಅವರಿಗೆ ಏನು ಕೊರತೆಯಾಗದಂತೆ ನೋಡಿಕೋ.


ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.


ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.


ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.


ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು