Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:30 - ಕನ್ನಡ ಸತ್ಯವೇದವು C.L. Bible (BSI)

30 ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆ ಹೊವ್ನ್, ಪಾವ್ಲು, ಬಾರ್ನಾಬಾಸ್, ಜುದ್ ಅನಿ ಸಿಲಾಸ್ ಜೆರುಜಲೆಮಾತ್ನಾ ಜಾವ್ಕ್ ಲಾಗ್ಲೆ, ತೆನಿ ಅಂತಿಯೊಕಾಕ್ ಜಾವ್ನ್ ಥೈತ್ಲ್ಯಾ ದೆವಾಚ್ಯಾ ಲೊಕಾಂಚೊ ತಾಂಡೊ ಮಿಳ್ವುನ್ ತೆಂಕಾ ಹಿ ಚಿಟ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:30
9 ತಿಳಿವುಗಳ ಹೋಲಿಕೆ  

ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.


ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.


ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.


ನೀನು ಇಲ್ಲಿಗೆ ಬಂದಿರುವುದು ಅವರಿಗೆ ಖಂಡಿತವಾಗಿ ತಿಳಿದೇ ತಿಳಿಯುತ್ತದೆ. ಈಗ ಏನು ಮಾಡೋಣ?


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.


ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು