Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:36 - ಕನ್ನಡ ಸತ್ಯವೇದವು C.L. Bible (BSI)

36 ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಉಲ್ಲಿ ದಿಸಾ ಹೊಲ್ಲ್ಯಾ ತನ್ನಾ ಪಾವ್ಲುನ್ ಬಾರ್ನಾಬಾಕ್, ಅಮಿ ದೆವಾಚಿ ಗೊಸ್ಟಿಯಾ ಸಾಂಗಲ್ಲ್ಯಾ ಲೈ ಶಾರಾತ್ನಿ ಭಾವಾಕ್ನಿ ಅನಿ ಭೆನಿಯಾಕ್ನಿ ಭೆಟುನ್ ತೆನಿ ಕಶೆ ಹಾತ್ ಮನುನ್ ಬಗುನ್ ಯೆಂವ್ವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:36
21 ತಿಳಿವುಗಳ ಹೋಲಿಕೆ  

ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.


ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.


ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


“ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.


ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.


ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ : “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು