Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:4 - ಕನ್ನಡ ಸತ್ಯವೇದವು C.L. Bible (BSI)

4 ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಾವ್ಲು ಬಾರ್ನಾಬಾಸ್ ಅನಿ ಉಲ್ಲಿ ಲೊಕಾ ಜೆರುಜಲೆಮಾಕ್ ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ತಾಂಡ್ಯಾಚ್ಯಾ ಲೊಕಾನಿ ತೆಂಕಾ ಸ್ವಾಗತ್ ಕರ್‍ಲ್ಯಾನಿ, ತೆನಿ ಸಗ್ಳ್ಯಾನಿ ದೆವಾನ್ ಅಪ್ಲ್ಯಾ ವಾಂಗ್ಡಾ ಕರಲ್ಲ್ಯಾ ಬರ್‍ಯಾ ಕಾಮಾಂಚ್ಯಾ ವಿಶಯಾತ್ ಥೈತ್ಲ್ಯಾ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:4
20 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.


ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.


“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು