Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:40 - ಕನ್ನಡ ಸತ್ಯವೇದವು C.L. Bible (BSI)

40 ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪಾವ್ಲುನ್ ಅಪ್ನಾ ವಾಂಗ್ಡಾ ಸಿಲಾಸ್ ಮನ್ತಲ್ಯಾಕ್ ಬಲ್ವುನ್ ಘೆವ್ನ್ ಗೆಲ್ಯಾನ್, ಅಂತಿಯೊಕ್ಯಾತ್ಲಾ ಭಾವಾನಿ ಪಾವ್ಲುಕ್ ಧನಿಯಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:40
14 ತಿಳಿವುಗಳ ಹೋಲಿಕೆ  

ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು