Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:8 - ಕನ್ನಡ ಸತ್ಯವೇದವು C.L. Bible (BSI)

8 ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಗ್ಳ್ಯಾ ಲೊಕಾಂಚಿ ಯೆವ್ಜನಿಯಾಬಿ ಗೊತ್ತ್ ಹೊತ್ತ್ಯಾ ದೆವಾನ್ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಮನುನ್ ಸಾಕ್ಷಿ ದಿಲ್ಯಾನ್. ದೆವಾನ್ ಅಮ್ಕಾ ದಿಲ್ಲ್ಯಾ ಸಾರ್ಕೆಚ್ ತೆಂಕಾಬಿ ಪವಿತ್ರ್ ಆತ್ಮೊ ದಿವ್ನ್ ಹೆ ಖರೆ ಮನುನ್ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:8
23 ತಿಳಿವುಗಳ ಹೋಲಿಕೆ  

ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು