Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:9 - ಕನ್ನಡ ಸತ್ಯವೇದವು C.L. Bible (BSI)

9 ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದೆವಾಚ್ಯಾ ನದ್ರೆತ್ ಅಮ್ಕಾ ಅನಿ ತೆಂಕಾ ಕಸ್ಲೊ ಫರಕ್ ಬಿ ನಾ, ತೆನಿ ವಿಶ್ವಾಸ್ ಕರಲ್ಲ್ಯಾ ಸಾಟ್ನಿ ದೆವಾನ್ ತೆಂಚಿ ಪಾಪಾ‌ ಮಾಪಿ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:9
24 ತಿಳಿವುಗಳ ಹೋಲಿಕೆ  

ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ಸುನ್ನತಿಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿಮಾಡಿಸಿಕೊಂಡದ್ದಕ್ಕಾಗಿ ಚಿಂತಿಸಬೇಕಾಗಿಲ್ಲ. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿ ಮಾಡಿಸಿಕೊಳ್ಳುವ ಅವಶ್ಯಕತೆಯಿಲ್ಲ.


ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು