Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:2 - ಕನ್ನಡ ಸತ್ಯವೇದವು C.L. Bible (BSI)

2 ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ವಿಷಯವಾಗಿ ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರು ಒಳ್ಳೇ ಸಾಕ್ಷಿಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಲುಸ್ತ್ರ ಮತ್ತು ಇಕೋನಿಯಾ ಪಟ್ಟಣಗಳ ವಿಶ್ವಾಸಿಗಳು ತಿಮೊಥೆಯನನ್ನು ಗೌರವಿಸುತ್ತಿದ್ದರು; ಮತ್ತು ಅವನ ಬಗ್ಗೆ ಒಳ್ಳೆಯದನ್ನೇ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಲಿಸ್ರ್ತಿಅನಿ ಇಕೊನಿಯಾ ಶಾರಾತ್ಲಿ ವಿಶ್ವಾಸಿ ಲೊಕಾ ತಿಮೊಥಿಕ್ ಮಾನ್ ದಿಯ್ತ್, ಅನಿ ತೆಚ್ಯಾ ವಿಶಯಾತ್ ಬರೆಚ್ ಸಾಂಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:2
14 ತಿಳಿವುಗಳ ಹೋಲಿಕೆ  

ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;


ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.


ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಪೌಲ ಮತ್ತು ಸೀಲ ಸೆರೆಮನೆಯಿಂದ ಹೊರಟು ಲಿಡಿಯಳ ಮನೆಗೆ ಹೋದರು. ಭಕ್ತವಿಶ್ವಾಸಿಗಳನ್ನು ಸಂಧಿಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿ ಅಲ್ಲಿಂದ ನಿರ್ಗಮಿಸಿದರು.


ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.


ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.


ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು