Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:26 - ಕನ್ನಡ ಸತ್ಯವೇದವು C.L. Bible (BSI)

26 ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಗುನ್ಗೆತ್ ರ್‍ಹಾತಾನಾಚ್ ಮೊಟೊ ಭುಕಂಪ್ ಹೊಲೊ, ತೊ ಭುಕಂಪ್ ಲೈ ಮೊಟೊ ಹೊಲ್ಲ್ಯಾ ಸಾಟ್ನಿ ಬಂಧಿಖಾನ್ಯಾಚಿ ಪಾಯಾ ಸಗ್ಳಿ ಹಾಲ್ಲಿ, ಅನಿ ದಾರಾ ಸಗ್ಳಿ ಉಗ್ಡುನ್ ಸಗ್ಳಿ ಚೊರಾಂಚಿ ಬಾಂಧಲಿ ಸರ್ಪಳಿಯಾ ಸುಟುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:26
15 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.


ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.


ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.


ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು