Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:29 - ಕನ್ನಡ ಸತ್ಯವೇದವು C.L. Bible (BSI)

29 ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು - ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಚ್ಯಾ ಮಾನಾ ಬಂದಿಖಾನ್ಯಾಚ್ಯಾ ಅಧಿಕಾರಿನ್ ಎಕ್ಲ್ಯಾಕ್ಡೆ ದಿವೊ ಪೆಟ್ವುನ್ ಹಾನ್ ಮನುನ್ ಸಾಂಗುನ್, ತೊ ಭುತ್ತುರ್ ಪಳುನ್ ಜಾವ್ನ್ ಪಾವ್ಲು ಅನಿ ಸಿಲಾಸಾಚ್ಯಾ ಫಿಡ್ಯಾತ್ ಕೊಸ್ಳುನ್ ಪಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:29
13 ತಿಳಿವುಗಳ ಹೋಲಿಕೆ  

ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು