Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:40 - ಕನ್ನಡ ಸತ್ಯವೇದವು C.L. Bible (BSI)

40 ಪೌಲ ಮತ್ತು ಸೀಲ ಸೆರೆಮನೆಯಿಂದ ಹೊರಟು ಲಿಡಿಯಳ ಮನೆಗೆ ಹೋದರು. ಭಕ್ತವಿಶ್ವಾಸಿಗಳನ್ನು ಸಂಧಿಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿ ಅಲ್ಲಿಂದ ನಿರ್ಗಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಪೌಲ ಸೀಲರು ಸೆರೆಮನೆಯಿಂದ ಹೊರಟು ಲಿಡಿಯಾಳ ಮನೆಗೆ ಹೋದರು. ಅಲ್ಲಿ ಅವರು ಕೆಲವು ವಿಶ್ವಾಸಿಗಳನ್ನು ಕಂಡು ಅವರನ್ನು ಸಂತೈಸಿದರು. ಬಳಿಕ ಪೌಲ ಸೀಲರು ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ತೆನಿ ದೊಗಾ ಬಂದಿಖಾನ್ಯಾತ್ನಾ ಸುಟ್ಕಾ ಹೊವ್ನ್ ಲಿಡಿಯಾಚ್ಯಾ ಘರಾಕ್ ಗೆಲೆ, ಥೈ ಉಲ್ಲಿ ಲೊಕಾ ದೆವಾಚ್ಯಾ ತಾಂಡ್ಯಾಚಿ ಹೊತ್ತಿ ತೆಂಕಾ ಉಮ್ಮೆದ್ ಹೊಯ್ ಸಾರ್ಕೆ ಕರುನ್ ಮಾನಾ ತೆನಿ ಥೈತ್ನಾ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:40
10 ತಿಳಿವುಗಳ ಹೋಲಿಕೆ  

ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.


ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು