Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:7 - ಕನ್ನಡ ಸತ್ಯವೇದವು C.L. Bible (BSI)

7 ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೂಸ್ಯಕ್ಕೆ ಎದುರಾಗಿ ಬಂದಾಗ ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲ ತಿಮೊಥೆಯರು ಮುಸಿಯ ನಾಡಿನ ಸಮೀಪಕ್ಕೆ ಹೋದರು. ಅವರು ಬಿಥೂನಿಯ ನಾಡಿನೊಳಗೆ ಹೋಗಬೇಕೆಂದಿದ್ದರು. ಆದರೆ ಯೇಸುವಿನ ಆತ್ಮನು ಅಲ್ಲಿಗೆ ಹೋಗದಂತೆ ಅವರನ್ನು ತಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಾವ್ಲು ಅನಿ ತಿಮೊಥಿ ಮಿಸಿಯಾ ಮನ್ತಲ್ಯಾ ಗಾಂವಾಂಚ್ಯಾ ಜಗ್ಗೊಳ್ ಗೆಲೆ, ತೆನಿ ಬಿಥಿನಿಯಾ ಮನ್ತಲ್ಯಾ ಗಾಂವಾತ್ ಜಾವ್ಚೆ ಮನುನ್ ಹೊತ್ತೆ, ಖರೆ ಜೆಜುಚ್ಯಾ ಆತ್ಮ್ಯಾನ್ ತೆಂಕಾ ಥೈ ಜಾಯ್ನಾ ಸಾರ್ಕೆ ಅಡ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:7
8 ತಿಳಿವುಗಳ ಹೋಲಿಕೆ  

ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು