Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:11 - ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹಿ ಜುದೆವಾಂಚಿ ಲೊಕಾ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾಕ್ಕಿಂತಾಬಿ ಬರಿ ಹೊವ್ನ್ ಹೊತ್ತಿ, ತೆನಿ ಪಾವ್ಲುನ್ ಅನಿ ಸಿಲಾಸಾನ್ ಸಾಂಗ್ತಲಿ ಸಂಗ್ತಿಯಾ ಉಮ್ಮೆದಿನ್ ಆಯಿಕ್ಲ್ಯಾನಿ, ಅನಿ ಹಿ ಸಂಗ್ತಿಯಾ ಖರೆಚ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸಾಟ್ನಿ ಸದ್ದಿಚ್ ಪವಿತ್ರ್ ಪುಸ್ತಕ್ ವಾಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:11
34 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.


ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II


ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.


ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು