ಅಪೊಸ್ತಲರ ಕೃತ್ಯಗಳು 17:15 - ಕನ್ನಡ ಸತ್ಯವೇದವು C.L. Bible (BSI)15 ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್. ಅಧ್ಯಾಯವನ್ನು ನೋಡಿ |