Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:20 - ಕನ್ನಡ ಸತ್ಯವೇದವು C.L. Bible (BSI)

20 ನೀನು ಹೇಳುತ್ತಿರುವ ಕೆಲವು ಸಂಗತಿಗಳು ನಮಗೆ ವಿಚಿತ್ರವಾಗಿ ತೋರುತ್ತವೆ. ಆದ್ದರಿಂದ ಅವುಗಳ ಅರ್ಥವೇನೆಂದು ತಿಳಿಯಬಯಸುತ್ತೇವೆ,” ಎಂದರು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಪೂರ್ವವಾದ ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ; ಆದಕಾರಣ ಅವೇನಿದ್ದಾವು ತಿಳಿಯಬೇಕೆಂದು ನಮಗೆ ಅಪೇಕ್ಷೆಯದೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಕಾ ತಿಯಾ ಸಾಂಗುಲಾಗಲಿ ಹಿ ಸಂಗ್ತಿಯಾ ನ್ಹವಿ ಹೊವ್ನ್ ಹಾತ್ ಹೆಚ್ಯಾ ಅದ್ದಿ ಕನ್ನಾಬಿ ಅಮಿ ಹಿ ಸಂಗ್ತಿಯಾ ಆಯ್ಕುಕುಚ್ ನಾತ್ ಹ್ಯಾ ಶಿಕಾಪಾಕ್ನಿ ಅರ್ತ್‍ ಕಾಯ್ ಮನ್ತಲೆ ತುಮಿ ಕಳುನ್ ಘೆವ್ಚೆ ಮನುನ್ ಆನ್ ಕರ್ತಾಂವ್” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:20
15 ತಿಳಿವುಗಳ ಹೋಲಿಕೆ  

ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.


ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.


ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.


ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?


ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು