Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:23 - ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಿಯಾ ತುಮ್ಚ್ಯಾ ಶಾರಾತ್ ಚಲುನ್ ಜಾಯ್ತ್ ರಾತಾನಾ ತುಮಿ ಫುಜ್ಯಾ ಕರ್‍ತಲಿ ದೆವಾಂಚಿ ಮುರ್ತಿಯಾ ಬಗಟ್ಲೊ ಎಕ್ ಬಲಿ ಭೆಟ್ವುತಲ್ಯಾ ಜಗ್ಯಾಕ್ “ಗೊತ್ತ್ ನತ್ತ್ಯಾ ದೆವಾಕ್” ಮನುನ್ ಲಿವಲ್ಲೆ ಹೊತ್ತೆ ತುಮ್ಕಾ ಗೊತ್ತ್ ನತ್ತ್ಯಾ ದೆವಾಕ್ ತುಮಿ ಆರಾಧನ್‍ ಕರುಲ್ಲ್ಯಾಸಿ, ತ್ಯಾ ದೆವಾಚ್ಯಾ ವಿಶಯಾತ್ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:23
19 ತಿಳಿವುಗಳ ಹೋಲಿಕೆ  

ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


“ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು.


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು