Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:24 - ಕನ್ನಡ ಸತ್ಯವೇದವು C.L. Bible (BSI)

24 ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಗ್ಳೆ ಜಗ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತ್ಯಾ ದೆವಾನುಚ್ ಮಳ್ಬಾಕ್ ಅನಿ ಜಿಮ್ನಿಕ್ ತೊಚ್ ವಡಿಲ್ ಮಾನ್ಸಾನಿ ರಚಲ್ಲ್ಯಾ ಹ್ಯಾ ಗುಡಿಯಾತ್ನಿ ತೊ ಜಿವನ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:24
36 ತಿಳಿವುಗಳ ಹೋಲಿಕೆ  

“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ.


ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು