Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:26 - ಕನ್ನಡ ಸತ್ಯವೇದವು C.L. Bible (BSI)

26 ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಎಕ್ ಮಾನ್ಸಾಕ್ ರಚುನ್ ದೆವಾನ್ ಹ್ಯಾ ಜಗಾರ್ ಮಾನ್ಸಾಂಚೊ ಕುಲ್ ಶುರು ಕರ್‍ಲ್ಯಾನ್, ಅನಿ ತೆನಿ ಖೈ ಕನ್ನಾ ಜಿವನ್ ಕರುಂಗೆತ್ ರಾವ್ಚೆ ಮನ್ತಲೆ ನಿರ್ಧಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:26
20 ತಿಳಿವುಗಳ ಹೋಲಿಕೆ  

ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ .


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.


ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.


ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು