Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:28 - ಕನ್ನಡ ಸತ್ಯವೇದವು C.L. Bible (BSI)

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಮಿ ತೆಚ್ಯಾ ವಾಂಗ್ಡಾ ವಸ್ತಿ ಕರ್ತಾಂವ್ , ಚಲ್ತಾಂವ್ ಅನಿ ಚಿಗರ್ತಾಂವ್, ತುಮ್ಚ್ಯಾತ್ಲ್ಯಾ ಉಲ್ಲ್ಯಾ ಗಿತಾ ಲಿವ್ತಲ್ಯಾ ಮಾನ್ಸಾನಿ ಅಮಿ ತೆಚಿ ಪೊರಾ ಮನುನ್ ಸಾಂಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:28
16 ತಿಳಿವುಗಳ ಹೋಲಿಕೆ  

ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಕಯಿನನ್‍ ಎನೋಷನಿಗೆ, ಎನೋಷ ಸೇತನಿಗೆ, ಸೇತ್ ಆದಾಮನಿಗೆ ಹುಟ್ಟಿದರು. ಆದಾಮನು ದೇವರ ಮಗನು.


ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು