ಅಪೊಸ್ತಲರ ಕೃತ್ಯಗಳು 17:30 - ಕನ್ನಡ ಸತ್ಯವೇದವು C.L. Bible (BSI)30 ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅದ್ಲ್ಯಾ ಕಾಲಾತ್ಲ್ಯಾ ಲೊಕಾನಿ ದೆವಾಕ್ ಅರ್ತ್ ಕರುನ್ ಘೆವ್ಕ್ ನಾತ್, ಖರೆ ದೆವಾನ್ ತೆಕಾ ಸಗ್ಳೆ ಧ್ಯಾನ್ ದಿವ್ಕ್ ನಾ, ಅತ್ತಾ ತರಿಬಿ ಜಗಾತ್ಲ್ಯಾ ಸಗ್ಳ್ಯಾಕ್ಡೆ ಬಿ ದೆವಾಕ್ಡೆ ಮನ್ ಪರ್ತುನ್ ಘೆವ್ಚೆ ಮನುನ್ ತೆನಿ ಹುಕುಮ್ ದಿಲಾ. ಅಧ್ಯಾಯವನ್ನು ನೋಡಿ |