Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:32 - ಕನ್ನಡ ಸತ್ಯವೇದವು C.L. Bible (BSI)

32 ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತ್ಯಾ ಲೊಕಾತ್ನಿ ಉಲ್ಲ್ಯಾನಿ ಜೆಜು ಮರ್ನಾಕ್ನಾ ಝಿತ್ತೊ ಹೊವ್ನ್ ಉಟುನ್ ಯೆಲಾ ಮನ್ತಲಿ ವಿಶಯ್ ಆಯ್ಕುನ್ ಯೆಡ್ವುಲ್ಯಾನಿ, ಅನಿ ಉಲ್ಲ್ಯಾನಿ ಹ್ಯಾ ವಿಶಯಾತ್ ಅನಿ ಎಗ್ದಾ ಸಾಂಗುಚೆ ತನ್ನಾ ಅಮಿ ಆಯಿಕ್ತಾಂವ್ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:32
23 ತಿಳಿವುಗಳ ಹೋಲಿಕೆ  

ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?


ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು


ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.


ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಸೈನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ,


ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.


ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.


ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.


ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು.


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು