Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:10 - ಕನ್ನಡ ಸತ್ಯವೇದವು C.L. Bible (BSI)

10 ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡು ಮಾಡುವದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್, ಮಿಯಾಚ್ ತುಜ್ಯಾ ವಾಂಗ್ಡಾ ಹಾಯ್ ತುಕಾ ಬುರ್ಶೆ ಕರುಕ್ ಕೊನಾಚ್ಯಾನ್ ಬಿ ಹೊಯ್ನಾ, ಮಾಜಿ ಉಲ್ಲಿ ಲೊಕಾ ಹ್ಯಾ ಶಾರಾತ್ ಹಾತ್, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:10
26 ತಿಳಿವುಗಳ ಹೋಲಿಕೆ  

ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.


ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು