Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:13 - ಕನ್ನಡ ಸತ್ಯವೇದವು C.L. Bible (BSI)

13 “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಪೂಜಿಸುವದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜ್ಯಪಾಲನಿಗೆ, “ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಇವನು ಜನರಿಗೆ ಉಪದೇಶಿಸುತ್ತಿದ್ದಾನೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೊ ಮಾನುಸ್ ಅಮ್ಚ್ಯಾ ಲೊಕಾಕ್ನಿ ಮೊಜ್ಜೆಚ್ಯಾ ಖಾಯ್ದೆಚ್ಯಾ ಪುಸ್ತಕಾಚ್ಯಾ ವಿರುಧ್ ಹೊಲ್ಲ್ಯಾ ರಿತಿನ್ ದೆವಾಕ್ ಆರಾಧನ್‍ ಕರುಚೆ ಮನುನ್ ಹ್ಯೊ ಲೊಕಾಕ್ನಿ ತೆಂಚಿ ಮನಾ ಪರ್ತುಕ್ ಕಟ್ಪಟ್ ಕರುಲಾಲಾ! ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:13
7 ತಿಳಿವುಗಳ ಹೋಲಿಕೆ  

ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.


ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು