Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:21 - ಕನ್ನಡ ಸತ್ಯವೇದವು C.L. Bible (BSI)

21 ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:21
28 ತಿಳಿವುಗಳ ಹೋಲಿಕೆ  

ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.


ದೇವರ ಚಿತ್ತವಾದರೆ ಪ್ರೌಢ ವಿಷಯಗಳತ್ತ ಪ್ರಗತಿಪರರಾಗೋಣ.


ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.


ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು.


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಆ ಯೆಹೂದ್ಯರು ತಮ್ಮೊಡನೆ ಇನ್ನೂ ಸ್ವಲ್ಪಕಾಲವಿರಬೇಕೆಂದು ಅವನನ್ನು ವಿನಂತಿಸಿದರು. ಆದರೆ ಪೌಲನು ಒಪ್ಪಿಕೊಳ್ಳಲಿಲ್ಲ.


ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ಎಫೆಸದ ತ್ರೊಫಿಮ ಎಂಬವನು ಪೌಲನ ಸಂಗಡ ಪಟ್ಟಣದಲ್ಲಿ ಇದ್ದುದನ್ನು ಅವರು ನೋಡಿದ್ದರು. ಈಗ ಅವನನ್ನೂ ದೇವಾಲಯದೊಳಕ್ಕೆ ಪೌಲನು ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ಪಂಚಾಶತ್ತಮ ಹಬ್ಬದ ತನಕ ನಾನು ಎಫೆಸದಲ್ಲಿಯೇ ಇರುತ್ತೇನೆ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು