Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:22 - ಕನ್ನಡ ಸತ್ಯವೇದವು C.L. Bible (BSI)

22 ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೈಸರೈಯದಲ್ಲಿ ಇಳಿದು ಯೆರೂಸಲೇವಿುಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೊ ಸೆಜಾರೆಯಾಕ್ ಯೆವ್ನ್ ಪಾವಲ್ಯಾ ತನ್ನಾ ಜೆರುಜಲೆಮಾಕ್ ಜಾವ್ನ್ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಜಾವ್ನ್ ಯೆತಾ ಮನುನ್ ಸಾಂಗುನ್ ಅಂತಿಯೊಕಾಕ್‍ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:22
16 ತಿಳಿವುಗಳ ಹೋಲಿಕೆ  

ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.


ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.


ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.


ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.


ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರುಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು.


ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು