ಅಪೊಸ್ತಲರ ಕೃತ್ಯಗಳು 18:26 - ಕನ್ನಡ ಸತ್ಯವೇದವು C.L. Bible (BSI)26 ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆನಿ ಸಿನಾಗೊತ್ ತೊ ಧರ್ಯ್ಯಾನ್ ಬೊಲುಕ್ ಚಾಲು ಕರ್‍ಲ್ಯಾನ್, ಅಕ್ವಿಲ್ಲಾನ್ ಅನಿ ಪ್ರಿಸ್ಕಿಲ್ಲಾನ್ ಆಯ್ಕುನ್ ತೆಕಾ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ತೆಕಾ ದೆವಾಚ್ಯಾ ವಿಶಯಾತ್ ಸಮಾ ಶಿಕಾಪ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |