Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:5 - ಕನ್ನಡ ಸತ್ಯವೇದವು C.L. Bible (BSI)

5 ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:5
33 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.


ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು