Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕ್ರಿಸ್ಪಸ್ ಮನ್ತಲೊ ಎಕ್ ಮಾನುಸ್ ಸಿನಾಗೊಚೊ ಅದಿಕಾರಿ ಹೊಲ್ಲೊ, ಅನಿ ತೆಚ್ಯಾ ಘರಾತ್ ಹೊತ್ತಿ ಸಗ್ಳ್ಯಾ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ, ಕೊರಿಂಥ್ ಮನ್ತಲ್ಯಾ ಗಾಂವಾತ್ ಪಾವ್ಲುನ್ ಸಾಂಗಲ್ಲಿ ಬರಿ ಖಬರ್ ಆಯ್ಕಲ್ಯಾ ಲೈ ಲೊಕಾನಿ ವಿಶ್ವಾಸ್ ಕರುನ್ ಬಾಲ್ತಿಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:8
25 ತಿಳಿವುಗಳ ಹೋಲಿಕೆ  

ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.


ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.


ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.


ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ಹಾಗೂ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡಿದ್ದ ಜೀತದಾರರಿಗೂ ಅವನೊಂದಿಗೆ ಸುನ್ನತಿಯಾಯಿತು.


ಇದಾದ ಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.


ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ತ್ರೊಫಿಮನನ್ನು ಅನಾರೋಗ್ಯದ ನಿಮಿತ್ತ ಮಿಲೇತದಲ್ಲಿಯೇ ಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು