Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:21 - ಕನ್ನಡ ಸತ್ಯವೇದವು C.L. Bible (BSI)

21 ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪಾವ್ಲುನ್ ಮೆಸೆದೊನಿಯಾ, ಅನಿ ಅಖಾಯಾ ಮನ್ತಲ್ಯಾ ದೆಶ್ಯಾತ್ನಿ ದಾಟುನ್ ಜೆರುಜಲೆಮಾಕ್ ಜಾವ್ಕ್ ನಿರ್ದಾರ್ ಕರುನ್ ಥೈ ಗೆಲ್ಲ್ಯಾ ತನ್ನಾ ರೊಮಾಕ್‍ಬಿ ಭೆಟುಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:21
31 ತಿಳಿವುಗಳ ಹೋಲಿಕೆ  

ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.


ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.


ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.


ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ.


ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.


ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.


ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.


ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.


ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.


ಮತ್ತೊಬ್ಬರ ಕ್ಷೇತ್ರದ ಸೇವಾಫಲಗಳನ್ನು ನಮ್ಮದೆಂದು ಹೊಗಳಿಕೊಳ್ಳದೆ, ನಿಮ್ಮ ಗಡಿಯಾಚೆಯ ನಾಡುಗಳಲ್ಲೂ ಶುಭಸಂದೇಶವನ್ನು ಸಾರಬೇಕೆಂಬುದೇ ನಮ್ಮ ಆಶಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು