ಅಪೊಸ್ತಲರ ಕೃತ್ಯಗಳು 19:24 - ಕನ್ನಡ ಸತ್ಯವೇದವು C.L. Bible (BSI)24 ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀದೇವಿಯ ಗುಡಿಯಂತೆ ಸಣ್ಣ ಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಕೆಲಸಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ದೆವುತ್ರಿ ಮನ್ತಲೊ ಸೊನಾರ್ ಹೊತ್ತೊ, ತೊ ಚಾಂದಿನ್ ಬಾರಿಕ್ ಅರ್ತೆಮಿ ದೆವಿಚಿ ಗುಡಿಯಾ ಕರಿ, ಅನಿ ತೆ ಕಾಮ್ ಕರ್ತಲ್ಯಾಕ್ನಿ ಫಾಯ್ದೊ ಹೊಯ್ ಸಾರ್ಕೆ ಕರಿತ್ ಹೊತ್ತೊ. ಅಧ್ಯಾಯವನ್ನು ನೋಡಿ |