Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:25 - ಕನ್ನಡ ಸತ್ಯವೇದವು C.L. Bible (BSI)

25 ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರಿಸಿ ಅವರಿಗೆ - ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇಮೇತ್ರಿಯನು ಈ ಜನರನ್ನು ಮತ್ತು ಇದೇ ರೀತಿಯ ಕಸುಬನ್ನು ಮಾಡುತ್ತಿದ್ದ ಇತರ ಜನರನ್ನು ಸಭೆಸೇರಿಸಿ ಅವರಿಗೆ, “ಜನರೇ, ನಮ್ಮ ಈ ಕಸುಬಿನಿಂದ ನಾವು ಬಹಳ ಹಣವನ್ನು ಗಳಿಸುತ್ತಿದ್ದೇವೆ ಎಂಬುದು ನಿಮಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಶಿಲ್ಪಿಗಳನ್ನೂ ಆ ಕಸುಬಿಗೆ ಸಂಬಂಧಪಟ್ಟ ವ್ಯಾಪಾರಿಗಳನ್ನೂ ಒಟ್ಟಿಗೆ ಕೂಡಿಸಿ ಅವರಿಗೆ, “ಜನರೇ, ಈ ವೃತ್ತಿಯಿಂದ ನಮಗೆ ಉತ್ತಮ ಆದಾಯ ಬರುತ್ತಿದೆಯೆಂಬುದನ್ನು ನೀವು ತಿಳಿದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಾಮಾ ಕರ್ತಲ್ಯಾಕ್ನಿ, ಅನಿ ತ್ಯಾತುರ್ ಉಮ್ಮೆದ್ ಹೊತ್ತ್ಯಾಕ್ನಿ ಬಲ್ವುನ್ ಮಾನ್ಸಾನು, ಹ್ಯಾ ಕಾಮಾನಿ ಅಮ್ಕಾ ಫಾಯ್ದೊ ಹೊವ್ಲಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:25
8 ತಿಳಿವುಗಳ ಹೋಲಿಕೆ  

ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು