Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:26 - ಕನ್ನಡ ಸತ್ಯವೇದವು C.L. Bible (BSI)

26 ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಶೆ ಪಾವ್ಲು ಕಾಯ್ ಕರುಲ್ಲಾ ಮನ್ತಲೆ ತುಮಿ ಬಗಲ್ಲ್ಯಾಸಿ ಅನಿ ಆಯ್ಕಲ್ಲ್ಯಾಸಿ, ಮಾನ್ಸಾಚ್ಯಾ ಹಾತಿನಿ ಕರಲ್ಲೊ ದೆವ್ ನ್ಹಯ್ ಮನುನ್ ಎಸಾತ್ ಎವ್ಡೆ ನ್ಹಯ್ ಸಗ್ಳ್ಯಾ ಆಸಿಯಾ ಪ್ರಾಂತಾತ್ ಬಿ ಸಾಂಗುಲ್ಲಾ ಅನಿ ಲೈ ಲೊಕಾಂಚಿ ಮನಾ ಪರ್ತುಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:26
23 ತಿಳಿವುಗಳ ಹೋಲಿಕೆ  

ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.


ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,


ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು