Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:28 - ಕನ್ನಡ ಸತ್ಯವೇದವು C.L. Bible (BSI)

28 ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಈ ಮಾತುಗಳನ್ನು ಕೇಳಿ ಕೋಪಾಕ್ರಾಂತರಾಗಿ - ಎಫೆಸದವರ ಅರ್ತೆಮೀದೇವಿ ಮಹಾದೇವಿ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಮಾತುಗಳನ್ನು ಕೇಳಿದ ಜನರು ಬಹು ಕೋಪಗೊಂಡು, “ಎಫೆಸದ ಅರ್ತೆಮಿದೇವಿಯೇ ಮಹಾದೇವಿ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಹಿ ಬೊಲ್ನಿಯಾ ಆಯ್ಕಲ್ಲ್ಯಾ ಲೊಕಾಂಚ್ಯಾ ತಾಂಡ್ಯಾನ್ ಲೈ ರಾಗಾನ್, ಎಪೆಸಾತ್ಲಿ ಅರ್ತೆಮಿ ದೆವಿಚ್ ಮೊಟಿ! ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:28
15 ತಿಳಿವುಗಳ ಹೋಲಿಕೆ  

ಅವರು ಒಮ್ಮನಸ್ಸಿನವರಾಗಿ ತಮ್ಮ ಶಕ್ತಿಸಾಮರ್ಥ್ಯವನ್ನೂ ಅಧಿಕಾರವನ್ನೂ ಆ ಮೃಗಕ್ಕೆ ಒಪ್ಪಿಸಿಬಿಡುತ್ತಾರೆ.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”


ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು