Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:29 - ಕನ್ನಡ ಸತ್ಯವೇದವು C.L. Bible (BSI)

29 ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಂಚಿ ಬೊಬ್ ಸಗ್ಳ್ಯಾ ಶಾರಾತ್ ಪಗಳ್ಳಿ ತನ್ನಾ ಮೆಸೆದೊನಿಯಾತ್ಲೊ ಗಾಯ್ ಅನಿ ಅರಿಸ್ತಾರ್ಕಾಕ್ನಿ ಧರುನ್ ಭಾಂದುನ್ ಲೈ ಲೊಕಾ ಗೊಳಾ ಹೊತಲ್ಯಾ ಜಾಗ್ಯಾರ್ ನ್ಹೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:29
19 ತಿಳಿವುಗಳ ಹೋಲಿಕೆ  

ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.


ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.


ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.


ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.


ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ಸಭೆಯಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಬೊಬ್ಬೆಹಾಕಿದರೆ, ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗಾಡಲಾರಂಭಿಸಿದರು. ಬಹುಜನರಿಗೆ ತಾವು ಅಲ್ಲಿಗೆ ಬಂದುದರ ಕಾರಣವೇ ತಿಳಿದಿರಲಿಲ್ಲ.


ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು;


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.


ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು