Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಪೌಲನು - ಯೋಹಾನನು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರವಾತನಲ್ಲಿ ಅಂದರೆ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬದಾಗಿ ಜನರಿಗೆ ಹೇಳಿದನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಪೌಲನು, “ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದನು. ಅಲ್ಲದೆ ತನ್ನ ತರುವಾಯ ಬರುವಾತನಲ್ಲಿ ನಂಬಿಕೆ ಇಡಬೇಕೆಂದು ಅವರಿಗೆ ಹೇಳಿದನು. ಆ ವ್ಯಕ್ತಿಯೇ ಯೇಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುವಾಂವಾಚೆ ಬಾಲ್ತಿಮ್ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆತಲ್ಯಾಕ್ನಿ ಹೊಲ್ಲೆ, ತೆನಿ ಲೊಕಾಕ್ನಿ ಅಪ್ಲ್ಯಾ ಮಾನಾ ಯೆತಲೊ ಹೊತ್ಯ್ತಾಚೆರ್ ವಿಶ್ವಾಸ್ ಥವಾ ಮನುನ್ ಸಾಂಗಲ್ಯಾನ್ ತೊ ಜೆಜುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:4
16 ತಿಳಿವುಗಳ ಹೋಲಿಕೆ  

ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.


ಪ್ರತ್ಯುತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು