Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:40 - ಕನ್ನಡ ಸತ್ಯವೇದವು C.L. Bible (BSI)

40 ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಕಶ್ಯಾಕ್ ಮಟ್ಲ್ಯಾರ್, ಅಮಿ ಹಿತ್ತೆ ಲೈ ಘಾತ್ಕೊ ಧಂಗೊ ಉಟ್ವುಲಾಂವ್, ಸಗ್ಳ್ಯಾ ಗದ್ದಲಾಕ್ನಿ ಮಾಪಿ ಕರುಕ್ ಕೊನಾಚೆನ್ಬಿ ಹೊಯ್ನಾ ಅನಿ ಸಮಾ ಕಾರನ್ ದಿವ್ಕ್ ಅಮ್ಚ್ಯೆಕ್ಡೆ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:40
10 ತಿಳಿವುಗಳ ಹೋಲಿಕೆ  

ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.


ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು.


ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ


ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.


ಇದಕ್ಕಿಂತಲೂ ಮಿಗಿಲಾಗಿ ನೀವು ಏನನ್ನಾದರೂ ಅಪೇಕ್ಷಿಸುವುದಾದರೆ, ಅದನ್ನು ಕಾನೂನುಬದ್ಧವಾಗಿ ಸೇರುವ ಸಭೆಯಲ್ಲಿ ತೀರ್ಮಾನಮಾಡಬಹುದು.


ಈ ಮಾತುಗಳನ್ನು ಹೇಳಿದ ಮೇಲೆ ಅವನು ಕೂಟವನ್ನು ಚದರಿಸಿದನು.


ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು