Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:9 - ಕನ್ನಡ ಸತ್ಯವೇದವು C.L. Bible (BSI)

9 ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾತುರ್ಲ್ಯಾ ಉಲ್ಲ್ಯಾ ಲೊಕಾನಿ ಅಪ್ಲೊ ಮನ್ ಘಟ್ ಕರುನ್ ಘೆಟ್ಲ್ಯಾನಿ, ಅನಿ ವಿಶ್ವಾಸ್ ಕರುಕ್ ನಾತ್, ಸಗ್ಳ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ತಿರಾನ್ನ್‌ ಮನ್ತಲ್ಯಾಚ್ಯಾ ಸಾಳೆತ್ ಧನಿಯಾಚ್ಯಾ ವಾಟೆಚ್ಯಾ ವಿಶಯಾತ್ ಬುರ್ಶೆ ಬೊಲ್ಲ್ಯಾನಿ, ತಸೆ ಹೊವ್ನ್ ಪಾವ್ಲುನ್ ತೆಂಕಾ ಸೊಡುನ್ ವಿಶ್ವಾಸಿ ಲೊಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ನೆಲ್ಯಾನ್, ಅನಿ ಸದ್ದಿ ತೆಂಕಾ ತುರ್ ಮನ್ತಲ್ಯಾ ಶಿಕ್ವುತಲ್ಯಾ ಖೊಲಿಕ್ ಬಲ್ವುನ್ ಘೆವ್ನ್ ಜಾವ್ನ್ ತೆಂಚ್ಯಾ ವಾಂಗ್ಡಾ ಚರ್ಚಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:9
39 ತಿಳಿವುಗಳ ಹೋಲಿಕೆ  

ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.


ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.


ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.


‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ.


ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”


ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು