Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:11 - ಕನ್ನಡ ಸತ್ಯವೇದವು C.L. Bible (BSI)

11 ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾಂಚೆ ಅನಿ ಜುದೆವಾಂಚೊ ಧರ್ಮ್ ಚಾಲ್ವನ್ ಘೆವ್ನ್ ಜಾತಲಿ ದುಸ್ರಿ ಲೊಕಾ ಕ್ರೆತಾತ್ಲಿ ಅನಿ ಅರೆಬಿಯಾತ್ಲಿ ಜಾಲ್ಯಾರ್ಬಿ, ದೆವಾನ್ ಕರಲ್ಲ್ಯಾ ಮೊಟ್ಯಾ ಕಾಮಾಂಚ್ಯಾ ವಿಶಯಾತ್ ಅಮ್ಚ್ಯಾ ಸ್ವತಾಚ್ಯಾ ಬಾಶಾನಿ ಸಾಂಗ್ತಲೆ ಅಮಿ ಆಯ್ಕಿಸಾರ್ಕೆ ಹೊಲೆ ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:11
36 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.


ಅರಬೀಯದ ಎಲ್ಲ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯ ಎಲ್ಲ ನಾಯಕರು;


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.


ಅಲ್ಲದೆ ಚಳಿಗಾಲವನ್ನು ಕಳೆಯಲು ಆ ಬಂದರು ಹಿತಕರವಾಗಿರಲಿಲ್ಲ. ಆದ್ದರಿಂದ ಅಲ್ಲಿಂದ ಹೊರಟು, ಸಾಧ್ಯವಾದರೆ, ಫೆನಿಕ್ಸ್ ಎಂಬ ಊರನ್ನು ಸೇರಿ, ಅಲ್ಲೇ ಚಳಿಗಾಲವನ್ನು ಕಳೆಯಬಹುದೆಂದು ಹೆಚ್ಚುಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಫೆನಿಕ್ಸ್, ಕ್ರೇಟ್ ದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ನಾವು ಅನೇಕ ದಿನಗಳವರೆಗೆ ನಿಧಾನವಾಗಿ ಪ್ರಯಾಣಮಾಡಿದೆವು. ಅತಿ ಕಷ್ಟದಿಂದ ‘ಸ್ನೀಡ’ ಎಂಬ ಊರಿಗೆ ಎದುರಾಗಿ ಬಂದೆವು. ಆ ದಿಸೆಯಲ್ಲಿ ಪ್ರಯಾಣಮಾಡಲು ಎದುರುಗಾಳಿ ನಮ್ಮನ್ನು ಬಿಡಲಿಲ್ಲ. ಆದ್ದರಿಂದ ನಾವು ಸಾಲ್ಮೋನೆ ಭೂಶಿರವನ್ನು ದಾಟಿ, ಕ್ರೇಟ್ ದ್ವೀಪದ ಮರೆಯನ್ನು ಸೇರಿದೆವು.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.


ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.


ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.


ಅರೇಬಿಯ ವಿಷಯವಾದ ದೈವೋಕ್ತಿ : ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.


ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು