Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:20 - ಕನ್ನಡ ಸತ್ಯವೇದವು C.L. Bible (BSI)

20 ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ದಿಸ್ ಕಾಳೊ ಹೊತಾ, ಚಂದ್ರಾಮ್ ರಗ್ತಾ ಸಾರ್ಕೊ ತಾಂಬ್ಡೊ ಹೊತಾ, ತನ್ನಾ ಧನಿಯಾಚೊ ಮೊಟೊ ಮಹಿಮೆಚೊ ದಿಸ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:20
25 ತಿಳಿವುಗಳ ಹೋಲಿಕೆ  

ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.


ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;


“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!


ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.


ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.


ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ !


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು