Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:23 - ಕನ್ನಡ ಸತ್ಯವೇದವು C.L. Bible (BSI)

23 ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುಕ್ ತುಮ್ಕಾ ಹಾತಾತ್ ಒಪ್ಸುನ್ ದಿತಲಿ ದೆವಾಚಿಚ್ ಯವ್ಜನ್ ಹೊತ್ತಿ, ದೆವಾನ್ ಲೈ ಫಾಟಿಚ್ ಹೆ ನಿರ್ಧಾರ್ ಕರುನ್ ಥವಲ್ಲ್ಯಾನ್. ಖರೆ ತುಮಿ ಪಾಪಿ ಲೊಕಾಂಚ್ಯಾ ಮಜತಿನ್ ತೆಕಾ ಕುರ್ಸಾರ್ ಮಾರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:23
39 ತಿಳಿವುಗಳ ಹೋಲಿಕೆ  

ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ನಮ್ಮ ಮುಖ್ಯಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು.


ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.


ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.


‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.


ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.


“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.


ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು