Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:24 - ಕನ್ನಡ ಸತ್ಯವೇದವು C.L. Bible (BSI)

24 ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ಮರ್ನಾಚೊ ತರಾಸ್ ಸೊಸ್ಲ್ಯಾನ್, ಖರೆ ದೆವಾನ್ ತೆಕಾ ಮರ್‍ನಾತ್ನಾ ಉಟ್ವುಲ್ಯಾನ್, ತಸೆ ಹೊವ್ನ್ ಮರ್ನಾಚ್ಯಾನ್ ಜೆಜುಕ್ ಧರುನ್ ಘೆವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:24
45 ತಿಳಿವುಗಳ ಹೋಲಿಕೆ  

ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.


ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುಸ್ವಾಮಿ ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?


ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.


ಜನರು ವಿಶ್ವಾಸಿಸದೆ ಹೋದುದಕ್ಕೆ ಯೆಶಾಯನು ಮತ್ತೊಂದು ವಚನದಲ್ಲಿ ಕಾರಣವನ್ನು ಸೂಚಿಸಿದ್ದಾನೆ:


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.


ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು